ಮಮತಾ ಬ್ಯಾಬರ್ಜಿ ಗಾಯಗೊಂಡ ಘಟನೆ: ಸಿಐಡಿ ತನಿಖೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಾರ್ಚ್‌ ೧೦ರಂದು ನಡೆದ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡ ಘಟನೆಯ ತನಿಖೆಯನ್ನು ಪಶ್ಚಿಮ ಬಂಗಾಳ ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಂಡಿದೆ.
ಸಿಐಡಿಯ ಆರು ಸದಸ್ಯರ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಅಜಯ್ ಠಾಕೂರ್ ನೇತೃತ್ವ ವಹಿಸಲಿದ್ದಾರೆ. ಬಿರುಲಿಯಾ ಬಜಾರ್‌ನಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ನಾಲ್ಕೈದು ಜನರು ಉದ್ದೇಶಪೂರ್ವಕವಾಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಮುಖ್ಯಮಂತ್ರಿಯ ಆರೋಪವನ್ನು ಎಸ್‌ಐಟಿ ಪರಿಶೀಲಿಸುತ್ತದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಸುಫಿಯಾನ್ ಅವರ ದೂರಿನ ಆಧಾರದ ಮೇಲೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ಚುನಾವಣಾ ಆಯೋಗವು ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯದರ್ಶಿಯಿಂದ ವರದಿಗಳನ್ನು ಕೋರಿತು. ವರದಿಗಳ ಆಧಾರದ ಮೇಲೆ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಹೆಚ್ಚಿಸುವಂತೆ ಆಯೋಗ ಪೊಲೀಸರಿಗೆ ನಿರ್ದೇಶನ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement