ಲಲಿತಾ ನಾಯಕಗೆ ಬೆದರಿಕೆ ಪತ್ರ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದೇವೆ: ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವರಾದ ಬಿ. ಟಿ. ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಕಠಿಣ ಕ್ರಮ‌ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ ನಾಯಕ್ ಅವರು ದೂರು ಸಲ್ಲಿಸಿರುವುದು ಗೊತ್ತಾಗಿದೆ ಎಂದರು.
ಲಲಿತಾ ನಾಯಕ್ ಅವರು ಸಾಹಿತಿ, ಗೌರವಾನ್ವಿತ ವ್ಯಕ್ತಿ, ಮಾಜಿ ಸಚಿವರು. ಅವರು ಬೆದರಿಕೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಪ್ರಕರಣವನ್ನು ಸರ್ಕಾರಿ ಗಂಭೀರವಾಗಿ ಪರಿಗಣಿಸುತ್ತದೆ. ಸಂಪೂರ್ಣ ತನಿಖೆ ಮಾಡುತ್ತೇವೆ.  ಇದರ ಹಿಂದೆ ಯಾರೇ ಇದ್ದರೂ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement