ರೈತ ಕಾಯ್ದೆಗಳಿಂದ ಕರ್ನಾಟಕ ಹಿಂದೆ ಸರಿಯವುದಿಲ್ಲ

posted in: ರಾಜ್ಯ | 0

ಬೆಂಗಳೂರು : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ರಾಜ್ಯ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು, ಹೀಗಾಗಿ ಅದರಿಂದ ರಾಜ್ಯ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.
ನ್ಯಾಯಾಲಯಕ್ಕೆ ಹೋಗಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯಕ್ಕೆ ಹೋಗುವುದು ನನ್ನ ಹಕ್ಕು, ಅದನ್ನು ಪ್ರಶ್ನಿಸುವುದಕ್ಕೆ ಕಾಂಗ್ರೆಸ್ ನವರಿಗೆ ಏನು ಹಕ್ಕಿದೆ ಎಂದು ಕೇಳಿದರು.
ಕಾಂಗ್ರೆಸ್ ನಾಯಕರು ನೀತಿ ಸಿದ್ಧಾಂತದ ಮೇಲೆ ಹೋರಾಟ ಮಾಡಬೇಕು. ಹೋರಾಟ ಮಾಡಲು ಕಾಂಗ್ರೆಸ್‌ನವರಿಗೆ ವಷಯವೇ ಸಿಗದ ಕಾರಣ ಹಾಗೂ ಹಿಂದಿನ ಸರ್ಕಾರ ಹೋದ ಕಾರಣಕ್ಕೆ ಮ್ಮ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದರು.

advertisement

 

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ನಿಮ್ಮ ಕಾಮೆಂಟ್ ಬರೆಯಿರಿ

advertisement