ಉತ್ತರಾಖಂಡ್‌ ಸಿಎಂಗೆ ಕೊರೊನಾ ಸೋಂಕು‌

ಡೆಹ್ರಾಡೂನ್: ಉತ್ತರಾಖಂಡ್ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ ಪ್ರತ್ಯೇಕವಾಗಿದ್ದಾರೆ.

ಟ್ವೀಟ್‌ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ರಾವತ್, ‘ ನನ್ನು ಪರೀಕ್ಷಾ ವರದಿ ಪಾಸಿಟಿವ್‌ ಬಂದಿದೆ. ನಾನು ಚೆನ್ನಾಗಿದ್ದೇನೆ ಮತ್ತು ನನಗೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಪ್ರತ್ಯೇಕವಾಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದಿರುವವರು, ದಯವಿಟ್ಟು ಕಾಳಜಿ ವಹಿಸಿ ಮತ್ತು ನಿಮ್ಮ ಕೋವಿಡ್‌ ಪರೀಕ್ಷೆ ಮಾಡಿಕೊಳ್ಳಿ, ಎಲ್ಲರೂ ಆರೋಗ್ಯವಾಗಿ ಎಂದು ಹಾರೈಸುತ್ತೇನೆ’ ಎಂದು ಬರೆದಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement