ನಿಗದಿತ ಸಮಯಕ್ಕೆ ಜಿಪಂ, ತಾಪಂ ಚುನಾವಣೆ ನಡೆಯಲಿದೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆ ಮುಂದೂಡುವುದಿಲ್ಲ ಇಲ್ಲ. ನಿಗದಿತ ಸಮಯಕ್ಕೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಶೂನ್ಯವೇಳೆಯಲ್ಲಿ ಶಾಸಕ ಸುನೀಲುಕುಮಾರ ಅವರು ವಿಷಯ ಪ್ರಸ್ತಾಪಿಸಿದ ವೇಳೆ ಅವರು ಜಿಪಂ, ತಾಪಂ ಚುನಾವಣೆ ಮುಂದೂಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿಗಳು ಕ್ಷೇತ್ರ ಮರುವಿಂಗಡಣೆ, ಮೀಸಲಾತಿ ಸೇರಿದಂತೆ ಮತ್ತಿತರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರ ಅವಧಿ ಮುಗಿಯುತ್ತಿದ್ದಂತೆ ಚುನಾವಣೆ ನಡೆಸಲು ಸಿದ್ಧರಾಗಿದ್ದೇವೆ. ಚುನಾವಣಾ ಆಯೋಗಕ್ಕೂ ಇದೇ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

ನಿಮ್ಮ ಕಾಮೆಂಟ್ ಬರೆಯಿರಿ

advertisement