ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ನಾನು ಟಿಕೆಟ್ ಆಕಾಂಕ್ಷಿ ಆಆಗಿದ್ದೇನೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದರು.
ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನನಗೆ ಟಿಕೆಟ್ ದೊರೆತು ಗೆದ್ದರೆ ಆದರ್ಶ ಕ್ಷೇತ್ರವಾಗಿಸುವೆ. ಅವಧಿ ಮುಗಿದ ನಂತರ ರಾಜಕೀಯವಾಗಿ ನಿವೃತ್ತಿ ಹೊಂದುವೆ. ಟಿಕೆಟ್ ಸಿಗದಿದ್ದರೆ ಬಿಜೆಪಿ ಅಭ್ಎಂಯರ್ದಥಿ ಪರವಾಗಿ ಪ್ರುರಚಾರಕ್ಕೆ ಹೋಗುವೆ ಎಂದರು..
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಆರೋಪವಿದೆ. ಈ ಕುರಿತು ರಾಜ್ಯಪಾಲರು, ಮುಖ್ಯಮಂತ್ರಿ, ಗೃಹ ಹಾಗೂ ಕೃಷಿ ಸಚಿವರಿಗೆ ದೂರು ಸಲ್ಲಿಸುವೆ ಎಂದು ಮುತಾಲಿಕ ತಿಳಿಸಿದರು
ನಿಮ್ಮ ಕಾಮೆಂಟ್ ಬರೆಯಿರಿ