6 ವರ್ಷಗಳಲ್ಲಿ ಕೇಂದ್ರದ ಇಂಧನ ತೆರಿಗೆ ಸಂಗ್ರಹ ಶೇ.300 ಹೆಚ್ಚಳ..!

ನವ ದೆಹಲಿ:ಕಳೆದ ಆರು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಇಂಧನ ತೆರಿಗೆ ಸಂಗ್ರಹ ಶೇ.300 ರಷ್ಟು ಹೆಚ್ಚಳವಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಸರ್ಕಾರವೇ ಮಾಹಿತಿ ನೀಡಿದ್ದು, ಕಳೆದ ಆರು ವರ್ಷಗಳ ಅವಧಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಹೆಚ್ಚುವರಿ ಸುಂಕದಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ.ಆದಾಯ ಹರಿದು ಬಂದಿದೆ.
ಈ ಬಗ್ಗೆ ಲೋಕಸಭೆಯಲ್ಲಿ ರಾಜ್ಯ ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ನೀಡಿರುವ ವರದಿಯನ್ವಯ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರಿಂದ ಕಳೆದ ಆರು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಸಂಗ್ರಹವು ಶೇಕಡಾ 300 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
‘2014-15ರಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಿಂದ 29,279 ಕೋಟಿ ರೂ. ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕದಿಂದ 42,881 ಕೋಟಿ ರೂ. ಸಂಗ್ರಹವಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದ (2020-21) ಮೊದಲ 10 ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆ ಸಂಗ್ರಹವು 2.94 ಲಕ್ಷ ಕೋಟಿ ರೂ.ಗೆ ಏರಿದೆ ಎಂದು ಲಿಖಿತ ರೂಪದಲ್ಲಿ ಅನುರಾಗ್ ಸಿಂಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
2014-15ರಲ್ಲಿ ನೈಸರ್ಗಿಕ ಅನಿಲದ ಮೇಲಿನ ಅಬಕಾರಿ ಸುಂಕದಿಂದ ಕೇಂದ್ರ ಸರ್ಕಾರವು 74,158 ಕೋಟಿ ರೂ.ಸಂಗ್ರಹಿಸಿದ್ದು, ಇದು 2020ರ ಏಪ್ರಿಲ್‌ ಮತ್ತು 20 ಜನವರಿ 2021ರ ಅವಧಿಯಲ್ಲಿ 2.95 ಲಕ್ಷ ಕೋಟಿ ರೂ.ಗೆ ಏರಿದೆ.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement