ಕೇಂದ್ರದ ಮಹತ್ವದ ನಿರ್ಧಾರ: ಏಪ್ರಿಲ್‌ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

ನವ ದೆಹಲಿ: ಏಪ್ರಿಲ್ 1 ರಿಂದ COVID-19 ಲಸಿಕೆಯನ್ನು 45 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ತೆಗೆದುಕೊಳ್ಳಬಹುದು ಎಂದು ಕೇಂದ್ರ ಮಂಗಳವಾರ (ಮಾ.೨೩) ಪ್ರಕಟಿಸಿದೆ.
ಪತ್ರಿಕಾಗೋಷ್ಠಿಯಲ್ಲಿಈ ವಿಷಯ ತಿಳಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 45 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಕೂಡಲೇ ನೋಂದಾಯಿಸಿ ಲಸಿಕೆ ಪಡೆಯಬೇಕು ಎಂದು ತಿಳಿಸಿದರು.
ದೇಶದಲ್ಲಿ ಕೊವಿಡ್‌ ಲಸಿಕೆ ಪ್ರಮಾಣಕ್ಕೆ ಕೊರತೆಯಿಲ್ಲ ಎಂದು ಭರವಸೆ ನೀಡಿದರು. ನಮ್ಮಲ್ಲಿ ಸಾಕಷ್ಟು ಲಸಿಕೆ ಇದೆ. ಎಲ್ಲಾ ಅರ್ಹರು ಕೊವಿಡ್‌-19 ವಿರುದ್ಧ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಳ್ಳಬೇಕು. 45 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಲಸಿಕೆ ಪಡೆಯಬೇಕೆಂದು ನಾವು ಮನವಿ ಮಾಡುತ್ತೇವೆ” ಎಂದು ಜಾವಡೇಕರ್ ಹೇಳಿದರು.
45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರನ್ನು ಲಸಿಕೆಗೆ ಅರ್ಹರನ್ನಾಗಿ ಮಾಡುವಂತೆ ಅನೇಕ ರಾಜ್ಯಗಳು ಕೇಂದ್ರಕ್ಕೆ ಮನವಿ ಮಾಡಿದ್ದವು. ಕೊವಿಡ್‌-19 ವ್ಯಾಕ್ಸಿನೇಷನ್‌ನ ಮಾರ್ಚ್ 1ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಅಸ್ವಸ್ಥರಿಗೆ ಪ್ರಾರಂಭವಾಯಿತು. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವಾರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಕೆಲವೇ ದಿನಗಳ ನಂತರ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕಲು ಕೇಂದ್ರ ಕ್ಯಾಬಿನೆಟ್ ತೀರ್ಮಾನಿಸಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement