ಜಯಲಲಿತಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ, ಶಾ ಫೋಟೊ

ಮದುರೈ: ಮಾಜಿ ಮುಖ್ಯಮಂತ್ರಿ ಎಂಜಿಆರ್‌ ಹಾಗೂ ಜಯಲಲಿತಾ ಅವರ ಸ್ಮರಣಾರ್ಥ ನಿರ್ಮಿಸಲಾದ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಫೋಟೊ ಇಡಲಾಗಿದೆ.
ಜಯಲಲಿತಾ ರಾಜ್ಯಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು ಜಯಲಲಿತಾ ದೇವಸ್ಥಾನ ನಿರ್ಮಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶಾದ್ಯಂತ ವಿವಿಧ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರಿಂದ ಮೋದಿ ಹಾಗೂ ಅಮಿತ್‌ ಶಾ ಅವರ ಫೋಟೊಗಳನ್ನು ದೇವಸ್ಥಾನದಲ್ಲಿ ಹಾಕಲಾಗಿದೆ. ಅಲ್ಲದೇ ನಿರ್ಮಲಾ ಸೀತಾರಾಮನ್‌ ಕೂಡ ಮದುರೈನವರಾಗಿದ್ದಾರೆ ಎಂದು ಕಂದಾಯ ಸಚಿವ ಆರ್.ಬಿ.ಉದಯಕುಮಾರ ಬಿಜೆಪಿ ಮುಖಂಡರ ಫೋಟೊ ಹಾಕಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ತಿರುಮಂಗಳಂ ಸಮೀಪ ೧೨ ಎಕರೆ ಜಮೀನಿನಲ್ಲಿ ಎಂಜಿಆರ್‌ ಹಾಗೂ ಜಯಲಲಿತಾ ಸ್ಮರಣಾರ್ಥ ದೇವಸ್ಥಾನ ನಿರ್ಮಿಸಲಾಗಿದೆ.

1 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement