ಭಾರತದಲ್ಲಿ 40,715 ದೈನಂದಿನ ಕೊರೊನಾ ಪ್ರಕರಣ

ನವ ದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 40,715 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಕಳೆದ ಎರಡು ದಿನಗಳಲ್ಲಿ ದಾಖಲಾದ ದೈನಂದಿನ ಸೋಂಕುಗಳಿಗಿಂತ ಕಡಿಮೆ ದಾಖಲಾಗಿದೆ.
ಕಳೆದ 24 ಗಂಟೆಗಳಲ್ಲಿ 199 ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮಂಗಳವಾರ ತಿಳಿಸಿದ್ದಾರೆ.
ಸೋಂಕಿನ ಸಂಖ್ಯೆ 11.68 ದಶಲಕ್ಷಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಈಗ 160,166ಕ್ಕೆ ಏರಿದೆ. 345,377 ಸಕ್ರಿಯ ಪ್ರಕರಣಗಳು ಮತ್ತು 1, 11,81,253 ಜನರು ರೋಗದಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.
967,459 ಮಾದರಿಗಳನ್ನು ಒಂದೇ ದಿನ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   'ಐಸ್‌ಕ್ರೀಂ ಮ್ಯಾನ್‌' ಖ್ಯಾತಿಯ ನ್ಯಾಚುರಲ್ಸ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ ಕಾಮತ್ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement