ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ ವರ್ತನೆ ಸಹಿಸಲು ಸಾಧ್ಯವಿಲ್ಲ. ಅವರ ವರ್ತನೆ ಹೀಗೆಯೇ ಮುಂದುವರಿದರೆ ವರಿಷ್ಠರಿಗೆ ದೂರು ನೀಡುತ್ತೇವೆ’ ಎಂದೂ ಹೇಳಿದ್ದಾರೆ.
ಯತ್ನಾಳ್ ಅವರ ಹೇಳಿಕೆಗಳಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆಯೂ ಈ ಹೇಳಿಕೆಗಳು ಪರಿಣಾಮ ಬೀರಬಹುದು.
ಅವರ ದಿನಕ್ಕೊಂದು ಹೇಳಿಕೆ ಪ್ರತಿಪಕ್ಷಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರಕ್ಕೆ ಮುಜುಗರವಾಗಿದೆ ಎಂದು ಹಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಗೂ ದೂರು ನೀಡಲಾಗುವುದು ಎಂದು ಶಾಸಕರು ಹೇಳಿದ್ದಾರೆ.
ಅನುದಾನ ಬಿಡುಗಡೆಗೆ ಮನವಿ: ತಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಶಾಸಕರು ಮನವಿ ಮಾಡಿದ್ದಾರೆ. ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆಯೂ ಶಾಸಕರು ಮುಖ್ಯಮಂತ್ರಿಯವರಿಗೆ ದೂರು ನೀಡಿದರು. ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಪಕ್ಷದ ಶಾಸಕರ ಬಗ್ಗೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ದೂರಿದ್ದಾರೆ.
ಮಾರ್ಚ್ 25 ರಂದು ಎಲ್ಲಾ ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು. ಕೆ

ಪ್ರಮುಖ ಸುದ್ದಿ :-   ಬೆಂಗಳೂರು ಕಾಲ್ತುಳಿತ ಪ್ರಕರಣ | ಐಪಿಎಸ್‌ ಅಧಿಕಾರಿ ವಿಕಾಸಕುಮಾರ ಅಮಾನತು ಆದೇಶ ರದ್ದುಗೊಳಿಸಿದ ಸಿಎಟಿ; ಸರ್ಕಾರಕ್ಕೆ ಹಿನ್ನಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement