ಸಿಡಿ ಪ್ರಕರಣ: ಅಪರಾಧಿಗಳು ಎಷ್ಟೇ ದೊಡ್ಡವರಿದ್ದರೂ ಶಿಕ್ಷೆ ತಪ್ಪಿದ್ದಲ್ಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರೇ ಆಗಿರಲಿ ಎಷ್ಟೇ ದೊಡ್ಡವರು ಆಗಿರಲಿ ಅವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ನಿಯಮ 69ರ ಅಡಿ ಮಂಡಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ ಅವರು, ಈ ಪ್ರಕರಣದ ವಿಚಾರಣೆ ಸ್ವತಂತ್ರವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ ಎಂದರು. ಪ್ರಕರಣದ ವಿಚಾರಣೆ ಎಲ್ಲಾ ಆಯಾಮಗಳಲ್ಲಿ ನಡೆಯುತ್ತಿದೆ. ಇದರಲ್ಲಿ ದೊಡ್ಡ ಮಟ್ಟದ ಕ್ರಿಮಿನಲ್ ಷಡ್ಯಂತ್ರ ನಡೆದಿದೆ. ಅದೇ ನೈತಿಕತೆಯ ಪ್ರಶ್ನೆಯೂ ಇದೆ ಎಂದು ಸಚಿವರು ಹೇಳಿದರು.
ರಮೇಶ್ ಜಾರಕಿಹೊಳಿ ನೀಡಿರುವ ದೂರು ಹಾಗೂ ಸಿಡಿಯಲ್ಲಿರುವ ಯುವತಿಯ ಮನವಿಯನ್ನು ಆಧರಿಸಿ ಪ್ರಕರಣ ವಿಚಾರಣೆ ನಡೆಯುತ್ತಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈಗಾಗಲೇ ಎರಡು ಬಾರಿ ರಮೇಶ್ ಜಾರಕಿಹೊಳಿ ಅವರನ್ನು ಕರೆದು ವಿಚಾರಣೆಗೆ ಒಳಪಡಿಸಲಾಗಿದೆ. ಯುವತಿ ಎಲ್ಲಿದ್ದಾಳೆ ಎಂಬುದು ಇದುವರೆಗೆ ಪತ್ತೆ ಆಗಿಲ್ಲ. ಯುವತಿ ಒಂದೇ ಸ್ಥಳದಲ್ಲಿ ನೆಲೆ ನಿಲ್ಲುತ್ತಿಲ್ಲ. ನಿರಂತರವಾಗಿ ಸ್ಥಳ ಬದಲು ಮಾಡುತ್ತಿದ್ದಾಳೆ. ನಮಗೆ ಮಾಹಿತಿ ಸಿಕ್ಕ ಕಡೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ಆ ಸ್ಥಳಕ್ಕೆ ಕಳುಹಿಸಲಾಗುತ್ತಿದೆ. ಆದರೆ ಯುವತಿ ಮಾತ್ರ ಸಿಗುತ್ತಿಲ್ಲ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement