ಹಟ್ಟಿ ಚಿನ್ನದ ಗಣಿ ಖಾಸಗೀಕರಣ ಇಲ್ಲ: ಸಚಿವ ನಿರಾಣಿ ಸ್ಪಷ್ಟನೆ

posted in: ರಾಜ್ಯ | 0

ಬೆಂಗಳೂರು:- ಯಾವುದೇ ಕಾರಣಕ್ಕೂ ಹಟ್ಡಿ ಚಿನ್ನದ ಗಣಿ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕವಾಗಿ 1800 ಕೆಜಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ, 5000 ಕೆಜಿ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆಯೇ ಹೊರತು ಖಾಸಗೀಕರಣ ಮಾಡುವ ಅಲೋಚನೆ ಇಲ್ಲ ಎಂದು ಹೇಳಿದ್ದಾರೆ.
ಹಟ್ಟಿ ಚಿನ್ನದ ಗಣಿಯನ್ನು ಆಧುನಿಕರಣ ಹಾಗೂ ಅದಿರನ್ನು ವಿಸ್ತರಣೆ ಮಾಡಬೇಕೆಂಬ ಆಲೋಚನೆ ಇದೆ ಎಂದು ಹೇಳಿದ್ದಾರೆ.
ಕಾರ್ಮಿಕರ ಬಹುದಿನಗಳ ಬೇಡಿಕೆಯಂತೆ ಹಟ್ಟಿಯಲ್ಲಿರುವ ಆಸ್ಪತ್ರೆಯನ್ನು ಮೇಲ್ದಜೆ೯ಗೆ ಏರಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುವುದು.ಸದ್ಯದಲ್ಲೇ ಅಧಿಕಾರಗಳ ಸಭೆ ಕರೆದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ವಾಗ್ದಾನ ಮಾಡಿದ್ದಾರೆ.ಜಿಲ್ಲಾ ಅದಿರು ( ಡಿಎಂಎಪ್ ) ಹಾಗೂ  ಸಿಎಸ್ ‌ಆರ್ ( corporate social responsibility ) ನಲ್ಲಿರುವ ನಿಧಿಯನ್ನು ಬಳಸಿಕೊಂಡು ಕಾಮಿ೯ಕರಿಗೆ ಇಲ್ಲಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯಗಳು ಸಿಗುವಂತೆ ಮಾಡಲಾಗುವುದು.ನಿಮ್ಮ ಹಲವು ದಿನಗಳ ಬೇಡಿಕೆಯನ್ನು ಈಡೇರಿಸಲು ಬದ್ಧ. ಈಗಾಗಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾರಣ, ಇಂತಹ ವದಂತಿಗಳಿಗೆ ಕಾರ್ಮಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಚರ್ಚಿಸಿಯೇ ನಿರ್ಧಾರ:ಕರ್ನಾಟಕದ  ಹೆಸರನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಹಟ್ಡಿ ಚಿನ್ನದ ಗಣಿ ಹೆಸರನ್ನು ” ಕನಾ೯ಟಕದ  ರಾಜ್ಯ ಹಟ್ಟಿ ಚಿನ್ನದ ಗಣಿ” ಎಂದು ಮರುನಾಮಕರಣ ಮಾಡುವ ತೀರ್ಮಾನಿಸಲಾಗಿದೆ. ರಾಜ್ಯದ ಹೆಸರನ್ನು ದೇಶ- ವಿದೇಶಗಳಲ್ಲಿ ಗುರುತಿಸಲು ಅನುಕೂಲವಾಗುವಂತೆ ಹೆಸರು ಬದಲಾವಣೆ ಮಾಡಬೇಕೆಂಬ ಪ್ರಸ್ತಾವನೆ ಇಲಾಖೆಯ ಮುಂದಿದೆ. ಈ ತೀಮಾ೯ನವನ್ನು ತೆಗೆದುಕೊಳ್ಳುವ ಮುನ್ನ ರಾಯಚೂರು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಸಭೆ ಕರೆದು ಅಭಿಪ್ರಾಯವನ್ನು ಪಡೆದ ನಂತರವೇ ಈ ನಿರ್ಧಾರಕ್ಕೆ ಬರಲಾಗಿದೆ ‌ಎಂದು ಸಚಿವ ನಿರಾಣಿ ಅವರು ಹೇಳಿದ್ದಾರೆ.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement