ಕೊರೊನಾ ಸೋಂಕು ಹೆಚ್ಚಳ:ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಗೆ ಸಜ್ಜಾಗಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸಜ್ಜಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯಸ ಸರಕಾರ ಸೂಚಿಸಿದೆ.
ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಸರಕಾರ, ಕೊರೊನಾ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದೆ. ಮೊದಲ ಹಂತದಲ್ಲಿ ೨೦೦ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ತೆಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ.
ಕೋರಮಂಗಲದ ಒಳಾಂಗಣ ಕ್ರೀಡಾಂಗಣ, ಹಜ್‌ ಭವನ, ಜಿಕೆವಿಕೆಯಲ್ಲಿ ಕೊರೊನಾ ಆರೈಕೆ ಕೇಂದ್ರ ಸಜ್ಜುಗೊಳಿಸುವಂತೆ ಆರೋಗ್ಯ ಇಲಾಖೆ ಬಿಬಿಎಂಪಿಗೆ ತಿಳಿಸಿತ್ತು. ಈಗ ಕೋರಮಂಗಲದ ಒಳಾಂಗಣ ಕ್ರೀಡಾಂಗಣವನ್ನು ಸಜ್ಜುಗೊಳಿಸಲಾಗಿದೆ.
ಸರಕಾರಿ ಆಸ್ಪತ್ರೆಗಳಲ್ಲಿನ ಅರ್ಧದಷ್ಟು ಹಾಸಿಗೆಗಳು ಕೊರೊನಾ ರೋಗಿಗಳಿಂದ ಭರ್ತಿಯಾದ ನಂತರ ೨೦೦ಕ್ಕೂ ಹೆಚ್ಚು ಹಾಸಿಗೆಗಳಿರುವ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲಾಗುವುದು. ಪ್ರಸ್ತುತ ತೀವ್ರ ನಿಗಾ ಘಟಕಗಳ ಹಾಸಿಗೆಗಳಿಗೆ ಕೊರತೆಯಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement