ಟಿಕಾಯತ್‌ ವಿರುದ್ಧ ಶಿವಮೊಗ್ಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ :ನಗರದಲ್ಲಿ ನಡೆದಂತ ರೈತರ ಮಹಾ ಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಪ್ರಚೋದನಾಕಾರಿ ಭಾಷಣದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 20ರಂದು ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ರೈತರ ಮಹಾ ಪಂಚಾಯತ್ ಕಾರ್ಯಕ್ರಮ ನಡೆಸಲಾಗಿತ್ತು. ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದರು. ಅಷ್ಟೇ ಅಲ್ಲ, ದೆಹಲಿ ಗಡಿಗಳಲ್ಲಿ ರೈತರು ಮಾಡಿರುವಂತೆ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಭಂದನ ಹಾಕಬೇಕು. ಟ್ರ್ಯಾಕ್ಟರ್ ಗಳನ್ನೇ ಅಸ್ತ್ರವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದ್ದರು. ಈ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದರು. ಹೀಗೆ ಪ್ರಚೋದನಕಾರಿ ಭಾಷಣ ಮಾಡಿದ್ದರ ಹಿನ್ನಲೆಯಲ್ಲಿ ಐಪಿಸಿ ಕಲಂ 153 ಅಡಿಯಲ್ಲಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement