ದೆಹಲಿ ಮಸೂದೆ ವಿವಾದ: ರಾಜ್ಯಸಭೆಯಲ್ಲಿ ಗದ್ದಲ

ನವ ದೆಹಲಿ: ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರಗಳನ್ನು ಮೊಟಕುಗೊಳಿಸಿ, ಲೆಫ್ಟಿನೆಂಟ್ ಗವರ್ನರ್‌ಗೆ ಮತ್ತಷ್ಟು ಅಧಿಕಾರ ನೀಡುವ ಕೇಂದ್ರ ಸರ್ಕಾರದ ಹೊಸ ಮಸೂದೆ ವಿರುದ್ಧ ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ಉಂಟಾಯಿತು.
ಹಣಕಾಸು ಮಸೂದೆ ಕುರಿತು ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡುವಾಗ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ತಿವ್ರ ವಾಗ್ವಾದ ನಡೆಯಿತು. ಅವರು ಮಾತನ್ನು ಸ್ಥಗಿತಗೊಳಿಸಬೇಕಾಯಿತು.
ಸರ್ಕಾರ ನಡೆಸಿ ಖಂಡಿಸಿ ಅನೇಕ ಸಂಸದರು ಘೋಷಣೆಗಳನ್ನು ಕೂಗಿದರು. ಕೇಂದ್ರ ಯೋಜನೆಗಳ ಜಾರಿಯ ವಿಚಾರವಾಗಿ ಇದೇ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ದೆಹಲಿಯಲ್ಲಿನ ಕೇಂದ್ರ ಸರ್ಕಾರದ ಪ್ರತಿನಿಧಿ ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರವನ್ನು ಈ ಪ್ರಸ್ತಾವಿತ ಕಾಯ್ದೆ ನೀಡಲಿದೆ. ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸುವಂತೆ ವಿರೋಧ ಪಕ್ಷಗಳು ಒತ್ತಾಯಿಸಿವೆ.
ನೀವು ಚುನಾವಣೆಯಲ್ಲಿ ಎರಡು ಬಾರಿ ಸೋತಿದ್ದೀರಿ. ಅದಕ್ಕಾಗಿ ನೀವು ಈ ಮಸೂದೆ ತಂದಿದ್ದೀರಿ. ಈ ಮಸೂದೆ ಪ್ರಜಾಪ್ರಭುತ್ವ ವಿರೋಧಿ. ಲೆಫ್ಟಿನೆಂಟ್ ಗವರ್ನರ್ ಎಂದರೆ ಸರ್ಕಾರ ಎಂದು ಇದು ಹೇಳುತ್ತಿದೆ. ಇಂದು ದೆಹಲಿಯ ಎರಡು ಕೋಟಿ ಜನರು ನ್ಯಾಯಕ್ಕಾಗಿ ಎದ್ದು ನಿಂತಿದ್ದಾರೆ’ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದರು.

ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement