ಪರಮ್‌ ಬೀರ್‌ ಮನವಿಗೆ ಪುರಸ್ಕರಿಸದ ಸುಪ್ರೀಂ ಕೋರ್ಟ್‌:ಹೈಕೋರ್ಟಿಗೆ ಹೋಗಿ ಎಂದ ನ್ಯಾಯಪೀಠ

ರಾಜ್ಯ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಭ್ರಷ್ಟಾಚಾರದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬಿರ್ ಸಿಂಗ್ ಅವರ ಮನವಿ ಪುರಸ್ಕರಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ. ಈ ವಿಷಯದಲ್ಲಿ ಮುಂಬೈ ಹೈಕೋರ್ಟ್‌ ಸಂಪರ್ಕಿಸುವಂತೆ ಉನ್ನತ ನ್ಯಾಯಾಲಯ ಕೇಳಿದೆ.
ಪೊಲೀಸ್ ಇಲಾಖೆಯ ಮೂಲಕ ‘ಹಣ ಸಂಗ್ರಹಣೆ ಯೋಜನೆ’ ನಡೆಸುತ್ತಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ಗೃಹ ಸಚಿವ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಿಂಗ್ ಅವರ ಅರ್ಜಿಯಲ್ಲಿ ಕೋರಲಾಗಿದೆ. ಮಹಾರಾಷ್ಟ್ರ ಪೊಲೀಸರ ಹೋಮ್ ಗಾರ್ಡ್‌ಗಳಲ್ಲಿ ಕಡಿಮೆ ದರ್ಜೆ ಹುದ್ದೆಗೆ ತಮ್ಮ ವರ್ಗಾವಣೆ ತಡೆಹಿಡಿಯಬೇಕೆಂದು ಅವರು ಮನವಿಯಲ್ಲಿ ಕೋರಿದ್ದರು.
ಅಂಬಾನಿ ಅವರಿಗೆ ಬಾಂಬ್ ಬೆದರಿಕೆ ತನಿಖೆ ಮತ್ತು ಪೊಲೀಸ್ ಅಧಿಕಾರಿ ಸಚಿನ್ ವಾಝೆ ಬಂಧನಕ್ಕೆ ಸಂಬಂಧಿಸಿದಂತೆ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಆರ್. ಸುಭಾಷ್ ರೆಡ್ಡಿ ಅವರನ್ನೊಳಗೊಂಡ ಎರಡು ನ್ಯಾಯಾಧೀಶರ ಪೀಠವು ಈ ವಿಷಯಲ್ಲಿ ಮುಂಬೈ ಹೈಕೋರ್ಟಿಗೆ ಹೋಗುವಂತೆ ತಿಳಿಸಿದೆ.

ಪ್ರಮುಖ ಸುದ್ದಿ :-   ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪದ ಹೊಟೇಲ್‌ ನಲ್ಲಿ ಬೆಂಕಿ ಅವಘಡ : 6 ಮಂದಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement