ಬೆಂಗಳೂರಿನಲ್ಲಿ ಪುರುಷರಿಗೇ ಹೆಚ್ಚು ಕೊರೊನಾ ಸೋಂಕು…

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಭೀತಿ ಮುಂದುವರೆದಿದ್ದು, ಬೆಂಗಳೂರಿನಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಇದರಲ್ಲಿ ಪುರುಷರೇ ಹೆಚ್ಚು ಎನ್ನುವುದು ಜಿಜ್ಞಾಸೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಒಟ್ಟರೆ 4.19 ಲಕ್ಷ ಕೊರೊನಾ ಸೋಂಕು ತಗುಲಿದ್ದು ಅವರಲ್ಲೇ ಪುರುಷರೇ ಹೆಚ್ಚು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ..
ಪುರುಷರಿಗೆ ಕೊರೊನಾ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಎಂದು ಅಧ್ಯಯನ ಹೇಳಿದೆ. ಬೆಂಗಳೂರಿನಲ್ಲಿ ಪುರುಷರಲ್ಲಿ ಹೆಚ್ಚು ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಪುರುಷರು ಹೆಚ್ಚು ಎಚ್ಚರಿಕೆಯಿಂದ ಇರುವುದು ಉತ್ತಮ. ಕೊರೋನಾ ಎರಡನೇ ಅಲೆಗೆ ಪುರುಷರೇ ಟಾರ್ಗೆಟ್ ಎನ್ನಲಾಗುತ್ತಿದ್ದು, ಪುರುಷರಲ್ಲೇ ಹೆಚ್ಚು ಕಂಡುಬರುತ್ತಿದೆ. ಕರ್ನಾಟಕದಲ್ಲಿ ಮಂಗಳವಾರ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಬೆಂಗಳೂರಿನಲ್ಲಿ 1,280 ಜನರಿಗೆ ಕೊರೋನಾ ದೃಢಪಟ್ಟಿದೆ.
ಯಾಕೆ ಪುರುಷರಿಗೆ ಹೆಚ್ಚು ಸೋಂಕು: ಪುರುಷರಲ್ಲೇ ಹೆಚ್ಚು ಕೊರೋನಾ ಸೋಂಕು ಕಂಡುಬರುತ್ತಿರುವುದಕ್ಕೆ ಅನೇಕ ಕಾರಣಗಳಿವೆ. ಅವರು ಹೆಚ್ಚು ಅರಗೆ ಅಡ್ಡಾಡುಉದು ಒಂದು ಕಾರಣವಾದರೆ ಮಾಸ್ಕ್ ಹಾಕಿಕೊಳ್ಳಲು ನಿರಾಸಕ್ತಿ ತೋರುತ್ತಿರುವುದು ಮತ್ತೊಂದು ಕಾರಣ ಎನ್ನಲಾಗಿದೆ. ಜಾತ್ರೆ, ಸಭೆ, ಸಮಾರಂಭಗಳಿಗೆ ಹಾಜರಾಗುವುದು, ಪಾರ್ಟಿ, ರೆಸ್ಟೋರೆಂಟ್​ಗಳಿಗೆ ಭೇಟಿ ನೀಡುವುದು ಪುರುಷರಲ್ಲಿ ಕೊರೋನಾ ಸೋಂಕು ಹೆಚ್ಚಲು ಕಾರಣವಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   ಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement