ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಇವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಲಾಗಿದೆ. ಈ ಕುರಿತು ಕಾನೂನು ತಜ್ಞರಿಂದ ಸಲಹೆ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಚಿವರಾಗಿರುವ ಡಾ.
ಸುಧಾಕರ್‌ ಉದ್ಧಟತನದ ಮಾತನ್ನು ಆಡಿದ್ದಾರೆ. 225 ಶಾಸಕರ ಮೇಲೆಯು ಮೇಲೆ ಸಂಶಯ ಬರುವಂತೆ ಮಾತನ್ನಾಡಿದ್ದಾರೆ. ಮನೆಯಲ್ಲೂ ಕುಟುಂಬಸ್ಥರಿಗೆ ಸಂಶಯ ಬರುವಂತಹ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೇಲೂ ಸಂಶಯ ಮೂಡುವಂತೆ ಹೇಳಿಕೆ ನೀಡಿದ್ದಾರೆ. ಇದೆಲ್ಲ ಬೇಜವಾಬ್ದಾರಿತನದ ಹೇಳಿಕೆ ಎಂದು ವಾಗ್ದಾಳಿ ನಡೆಸಿದರು.
225 ಶಾಸಕರಲ್ಲಿ ಹೆಣ್ಣು ಮಕ್ಕಳೂ ಇದ್ದಾರೆ. ಅವರಿಗೆಲ್ಲ ಇಂಥ ಹೇಳಿಕೆಯಿಂದ ಏನಾಗಬೇಡ? ಸ್ವಲ್ಪವೂ ಜವಾಬ್ದಾರಿ ಬೇಡವೇ.? ಹೀಗಾಗಿ ಸುಧಾಕರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸುಧಾಕರ್ ಸೇರಿದಂತೆ ಆರು ಜನ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದೇವೆ. ಇವರ ಸಿಡಿಗಳು ಇವೆಯೆಂದು ಹೆಸರಿ ಕೋರ್ಟಿಗೆ ಹೋಗಿ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಇವರು ಸದನದ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಭೂ ಮಂಜೂರಾತಿ ಅಕ್ರಮ: ಜೆಡಿಎಸ್‌ ಶಾಸಕ ಲಿಂಗೇಶ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement