ಎಎಪಿ ಶಾಸಕ ಸೋಮನಾಥ ಭಾರತಿ ಜೈಲು ಶಿಕ್ಷೆ ಅಮಾನತು ಮಾಡಿದ ದೆಹಲಿ ಹೈಕೋರ್ಟ್‌

ನವ ದೆಹಲಿ: ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ 2 ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ ಆಪ್ ಶಾಸಕ ಸೋಮನಾಥ ಭಾರ್ತಿ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ.
ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮನಾಥ ಭಾರ್ತಿ ಅವರ ಅಪರಾಧ ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿದೆ.
ಹಲ್ಲೆ ಪ್ರಕರಣದಲ್ಲಿ ಶಿಕ್ಷೆಯನ್ನು ದೆಹಲಿ ಸೆಷನ್ಸ್ ನ್ಯಾಯಾಲಯ ಎತ್ತಿಹಿಡಿದಿದ್ದ ನಂತರ ಸೋಮನಾಥ್ ಭಾರ್ತಿ ಬುಧವಾರ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್‌ನ ಮುಂದೆ ಅವರು ಸಲ್ಲಿಸಿದ್ದ ಮನವಿಯಲ್ಲಿ, ಪರಿಷ್ಕರಣೆ ಅರ್ಜಿಯ ಬಾಕಿ ಇರುವಾಗ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಲು ಅವರು ಕೋರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕೈಟ್ ಅವರು, ಸೋಮನಾಥ ಭಾರ್ತಿ ಅವರ ಅಪರಾಧ ಮತ್ತು 2 ವರ್ಷಗಳ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ.
2016 ರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷ ಜನವರಿಯಲ್ಲಿ ಸೋಮನಾಥ್ ಭಾರ್ತಿ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು. ವಿಚಾರಣಾ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ ನಂತರ ಸೋಮನಾಥ್ ಭಾರ್ತಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ಪ್ರಮುಖ ಸುದ್ದಿ :-   ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement