ಕರ್ನಾಟಕದಲ್ಲಿ ಎರಡೂವರೆ ಸಾವಿರ ದಾಟಿದ ಏಕದಿನದ ಕೊರೊನಾ ಸೋಂಕು…! ಬೆಂಗಳೂರಲ್ಲಿ ಎಚ್ಚರಿಕೆ ಗಂಟೆ…!!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ (ಗುರುವಾರ) 2,523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,78,478ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸಾವಿನ ಸಂಖ್ಯೆ 12,471ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿಯೇ ಸುಮಾರು ಶೇ.65ರಷ್ಟು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಯಲ್ಲಿ 1,623 ಮಂದಿಗೆ ಸೋಂಕು ದೃಢಪಟ್ಟಿದೆ, ಇದರೊಂದಿಗೆ ಸೋಂಕಿತರ ಸಂಖ್ಯೆ 4,22,859ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 1,192 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,47,781ಕ್ಕೆ ಏರಿಕೆಯಾಗಿದೆ. ಒಟ್ಟು 18,207 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 150 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement