ಕೊರೊನಾ ಸೋಂಕು ಹೆಚ್ಚಳ: ಬೆಂಗಳೂರಲ್ಲಿ ಸೋಂಕಿತರ ಕೈಗೆ ಮತ್ತೆ ಸೀಲ್‌…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಹೀಗಾಗಿ ಸೋಂಕು ದೃಢಪಟ್ಟಿರುವ ಎಲ್ಲರಿಗೂ ಸೀಲ್ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ‌ ಹೆಚ್ಚುತ್ತಿರುವ ಕೋವಿಡ್ ಹರಡುವಿಕೆಯನ್ನ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಸಚಿವರು ಸಮಾಲೋಚನಾ ಸಭೆ ನಡೆಸಿದ ಬಳಿಕ ಮಾತನಾಡಿದಅವರು, ’20 ರಿಂದ 40 ವರ್ಷದೊಳಗಿರುವವರಲ್ಲೂ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. 70 ವರ್ಷ ಮೇಲ್ಪಟ್ಟವರಲ್ಲಿ ಗಂಭೀರ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣ ಇಲ್ಲದ ಸೋಂಕಿತರು ಮನೆಯಲ್ಲೇ ಪ್ರತ್ಯೇಕವಾಗಿರಬೇಕು. ಅಂತಹವರು ಹೊರಗಡೆ ಓಡಾಟ ಮಾಡಬಾರದು ಎನ್ನುವ ಕಾರಣಕ್ಕೆ ಅವರ ಕೈಗೆ ಸೀಲ್‌ ಹಾಕಲಾಗುವುದು’ ಎಂದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಸುಮಾರು 1,400 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೇ 4 ತಿಂಗಳುಗಳಲ್ಲಿ ಮೊದಲ ಬಾರಿ ಇಷ್ಟೊಂದು ಪ್ರಕರಣಗಳು ಕಂಡು ಬಂದಿವೆ. ಹೀಗಾಗಿ ಕಠಿಣ ನಿಯಂತ್ರಣ ಕ್ರಮ ಕೈಗೊಳ್ಳಲು ಹೋಂ ಕ್ವಾರಂಟೈನ್‌ ಆಗುವವರಿಗೆ ಕೈಗಳಿಗೆ ಸೀಲ್‌ ಹಾಕಲಾಗುವುದು. ಇದನ್ನು ಸ್ಥಗಿತ ಮಾಡಲಾಗಿತ್ತು. ಆದರೆ ಪ್ರಕರಣ ಹೆಚ್ಚಳವಾಗಿದ್ದರಿಂದ ಇದನ್ನು ಮತ್ತೆ ತರುತ್ತಿದ್ದೇವೆ ಎಂದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement