ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ದಿ. ಸುರೇಶ ಅಂಗಡಿ ಪತ್ನಿ ಬಿಜೆಪಿ ಅಭ್ಯರ್ಥಿ

ಬೆಳಗಾವಿ: ಪ್ರತಿಷ್ಠಿತ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಮತ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯು ದಿವಂಗತ ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ ಅವರಿಗೆ ಟಿಕೆಟ್‌ ನೀಡಬಹುದು ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿತ್ತು. ಆದರೆ ಮಹತ್ವದ ಬೆಳವಣಿಗೆಯಲ್ಲಿ ಸುರೇಶ ಅಂಗಡಿಯವರ ಧರ್ಮಪತ್ನಿ ಮಂಗಲಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಅವರು ಮಾ.೨೯ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅನುಕಂಪದ ಮತದ ಲೆಕ್ಕಾಚಾರದಲ್ಲಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿದ್ದರಿಂದ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆಗೆ ಕಣ ಸಜ್ಜಾದಂತಾಗಿದೆ.

ಇನ್ನು  ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ್ ಹಾಗೂ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಕ್ಕೆ ಶರಣು ಸಲಗಾರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಪ್ರಮುಖ ಸುದ್ದಿ :-   ಅಕ್ರಮ ಹಣ ವರ್ಗಾವಣೆ ಪ್ರಕರಣ : ಕೇಜ್ರಿವಾಲಗೆ ದೆಹಲಿ ಹೈಕೋರ್ಟ್‌ ನಿಂದ ಸಿಗದ ಜಾಮೀನು

 

4 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement