ಭಾರತದಲ್ಲಿ ಕೊರೊನಾ ಸ್ಫೋಟ:53 ಸಾವಿರ ದಾಟಿದ ಏಕದಿನದ ಸೋಂಕು..!!

ನವ ದೆಹಲಿ: ದೇಶಾದ್ಯಂತ ಕೊರೊನಾ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿತ್ತಲೇ ಇದೆ. ಭಾರತದಲ್ಲಿ ದೈನಂದಿನ ಸೋಂಕಿನ ಸಂಖ್ಯೆ ಗುರುವಾರದ ವರದಿಯಲ್ಲಿ 53 ಸಾವಿರ ದಾಟಿದೆ.
ಕಳೆದ 24 ತಾಸಿನಲ್ಲಿ ದೇಶದಲ್ಲಿ 53,476 ಜನರಲ್ಲಿ ಸೋಂಕು ಪತ್ತೆಯಾಗಿದೆ ಹಾಗೂ 251 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ವರದಿ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,17,34,058ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,60,692ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 3,95,192 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,31,650 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 26,490 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬುಧವಾರ ಒಂದೇ ದಿನ 10,65,021 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 23,75,03,882 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 5,08,41,286 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement