೩ ಕ್ಷೇತ್ರಗಳಿಗೆ ಉಪಚುನಾವಣೆ: ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ

ಬೆಂಗಳೂರು : ಮೂರು ಕ್ಷೇತ್ರಗಳ ಉಪಚುನಾವಣೆ ಸಮರಕ್ಕೆ ಕಾಂಗ್ರೆಸ್‌ ಸಜ್ಜಾಗಿದೆ.ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈಗ ನಾಮಪತ್ರ ಸಲ್ಲಿಸುವ ದಿನಾಂಕಗಳನ್ನೂ ನಿಗದಿ ಮಾಡಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಮಾರ್ಚ್.29ರಂದು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉಪಸ್ಥಿತರಿರುವರು ಎಂದು ಹೇಳಲಾಗಿದೆ.
ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವರಾಜ್ ತುರುವಿಹಾಳ್ ಅವರು ಸಹ ಮಾರ್ಚ್ 29ರ ಕಾಂಗ್ರೆಸ್ ಮುಖಂಡರ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಲ್ಲಮ್ಮ ನಾರಾಯಣರಾವ್ ಅವರು ಮಾರ್ಚ್ 30ರಂದು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್‌ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement