ಇಸ್ಲಾಮಾಬಾದ್: ಕೊರೊನಾ ಸೋಂಕಿಗೊಳಗಾಗಿದ್ದರೂ ತಮ್ಮ ಮಾಧ್ಯಮ ತಂಡದೊಂದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಭೆ ನಡೆಸಿದ್ದನ್ನು ವಿರೋಧ ಪಕ್ಷಗಳು ಟೀಕಿಸಿವೆ.
ಇಮ್ರಾನ್ಖಾನ್ ಗುರುವಾರ ಕೊರೊನಾ ಲಸಿಕೆ ತೆಗೆದುಕೊಂಡಿದ್ದರು. ಆದರೆ ಅವರಿಗೆ ಶುಕ್ರವಾರ ಸೋಂಕು ತಗುಲಿರುವುದು ದೃಢಪಟ್ಟಿತ್ತು. ದೇಶದ ಪ್ರಥಮ ಮಹಿಳೆ ಬುಶ್ರಾ ಬೀಬಿ ಅವರಿಗೂ ಸೋಂಕು ತಗುಲಿದೆ. ಇದರ ಮಧ್ಯೆ ಪ್ರಧಾನಿ ತಮ್ಮ “ಬನಿಗಾಲ್ʼ ನಿವಾಸದಲ್ಲಿ ಸಭೆ ನಡೆಸಿದ್ದ ಚಿತ್ರವನ್ನು ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಶಿಬ್ಲಿ ಫರಾಜ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ವಿರೋಧ ಪಕ್ಷದವರು ಹಾಗೂ ಕೆಲವು ಸಮಾಜದ ಮುಖಂಡರು ಖಂಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಕೊರೊನಾದ ೩ನೇ ಅಲೆ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಸ್ವತಃ ಪ್ರಧಾನಿ ಖಾನ್ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಸಭೆಯಲ್ಲಿ ಭಾಗವಹಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿರೋಧ ಪಕ್ಷದ ಮುಖಂಡರು ಆಗ್ರಹಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ