ತಕ್ಷಣವೇ ರಮೇಶ ಜಾರಕಿಹೊಳಿ ಬಂಧಿಸಿ: ಕಾಂಗ್ರೆಸ್‌

ಬೆಂಗಳೂರು:ಸಿಡಿ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿ ನೀಡಿದ್ದಕ್ಕೆ
ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌, ರಮೇಶ್ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದೆ.
ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ, ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ’ ಎಂದು ರಮೇಶ್ ಜಾರಕಿಹೊಳಿ ಸಿಡಿ ಯುವತಿ ದೂರು ನೀಡಿದ ಬೆನ್ನಲ್ಲೇ ಹೇಳಿಕೆ ನೀಡಿದ್ದರು. ಹೀಗಾಗಿ ಸಿಡಿ ಪ್ರಕರಣದ ಮೇಲೆ ಜಾರಕಿಹೊಳಿ ಯಾವ ಮಟ್ಟಿನ ಪ್ರಭಾವ ಬೀರಬಲ್ಲರು, ಎಂಬುದಕ್ಕೆ ಈ ಹೇಳಿಕೆಗಳೇ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರೇ ಇದಕ್ಕೆ ಅವಕಾಶ ನೀಡದಂತೆ ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸಿ ಎಂದು ಕಾಂಗ್ರೆಸ್‌ ಆಗ್ರಹಿಸಿದೆ.
ನಾನು ಕೊಟ್ಟ ದೂರು ಮೊದಲು ತನಿಖೆಯಾಗಬೇಕು, ಸದ್ಯದಲ್ಲೇ ಮಹಾನಾಯಕ ಯಾರೆಂದು ಗೊತ್ತಾಗಲಿದೆ ಎಂದು ಹೇಳಿರುವ ರಮೇಶ್ ಜಾರಕಿಹೊಳಿ, ಈ ಸಿಡಿ ಪ್ರಕರಣದಲ್ಲಿ ನಾನು ನಿರಪರಾಧಿ, ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಯುವತಿ ರೂಂನಲ್ಲಿ 10 ಲಕ್ಷ ಹಣ ಸಿಕ್ಕಿದೆ, ಆರೋಪಿಗಳ ಮನೆಯಲ್ಲಿ ಚಿನ್ನ, ದಾಖಲೆಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮೊದಲು ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಸಿಡಿ ಯುವತಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement