ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್‌ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ.
ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್‌ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ.
ಆ ಪ್ರಕರಣದ ʼಸಂತ್ರಸ್ತೆ ನೇರವಾಗಿ ಮಹಾನಾಯಕನ ಹೆಸರು ಪ್ರಸ್ತಾಪ ಮಾಡಿದ್ದಾಳೆ. ಮಹಾನಾಯಕ ನಮ್ಮ ಜೊತೆ ಇದ್ದಾನೆ ಎಂಬ ಮಾತುಗಳನ್ನಾಡಿದ್ದಾಳೆ. ಸದನದಲ್ಲಿ ಬೊಬ್ಬಿರಿದ ಮಹಾಶೂರರು ಈಗೇನು ಹೇಳುತ್ತಾರೆ? ಕಾಂಗ್ರೆಸ್‌ ಕಚೇರಿಯಲ್ಲೇ ಷಡ್ಯಂತ್ರ ನಡೆದಿದೆಯೇ!? ಎಂದು ಬಿಜೆಪಿ ಟ್ವೀಟ್‌ನಲ್ಲಿ ಪ್ರಶ್ನಿಸಿದೆ.
ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದ್ದು, ಇವರ ರಾಜೀನಾಮೆಯನ್ನು ರಾಷ್ಟ್ರೀಯ ಮಹಾನಾಯಕಿ ತಕ್ಷಣವೇ ಪಡೆಯಬೇಕು. ಹೆಣ್ಣನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ಪಡೆಯಲು ಷಡ್ಯಂತ್ರ ರೂಪಿಸಿದ ಕಾಂಗ್ರೆಸ್ ಜನತೆಯ ಕ್ಷಮಾಪಣೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement