ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ.
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 4,24,349ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಂಕಿಗೆ ಮೂರು ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ 1,207 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,48,988ಕ್ಕೆ ಏರಿಕೆಯಾಗಿದೆ. 19,553 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 174 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಣೆ ಮಾಡುತ್ತಿದ್ದ 10 ಹಳದಿ ಅನಕೊಂಡ ಹಾವುಗಳು ವಶಕ್ಕೆ, ಓರ್ವನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement