ಬೆಂಗಳೂರಲ್ಲಿ ೧೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಬೆಂಗಳೂರು: ಬೆಂಗಳೂರು ನಗರದ ಶಾಲಾ ಮಕ್ಕಳಲ್ಲಿ ೧೪ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿ ನಾಲ್ಕು ಶಾಲೆಗಳ ೧೪ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಆಡಳಿತಕ್ಕೆ ತಲೆನೋವು ತಂದಿದೆ. ಹತ್ತು ವರ್ಷದೊಳಗಿನ ಮಕ್ಕಳಿಗೆ ಸೋಂಕು ಹರಡುತ್ತಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು.
ಜೋಗುಪಾಳ್ಯ ವಾರ್ಡ್‍ನಲ್ಲಿರುವ ಬಿಬಿಎಂಪಿಯ ಒಂದೇ ಶಾಲೆಯ 9 ವಿದ್ಯಾರ್ಥಿಗಳಿಗೆ ಸೋಂಕು ಹರಡಿದೆ. ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು 9 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಜೋಗುಪಾಳ್ಯ ಬಾಲಕರ ಪ್ರೌಢಶಾಲೆ ಬಂದ್ ಮಾಡಿದ್ದಾರೆ.
ಸೋಂಕು ಕಾಣಿಸಿಕೊಂಡಿರುವ ಶಾಲೆಗಳಿಗೆ ರಜೆ ನೀಡಿ ಎಲ್ಲ ಕಟ್ಟಡಗಳಿಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡಿರುವ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿರುವವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement