
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆಯಾಗಿದ್ದು, ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಶುಕ್ರವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಶುಕ್ರವಾರ (ಮಾ.೨೬) ಮಧ್ಯಾಹ್ನ ಯುವತಿ ಪರವಾಗಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರು ಯುವತಿ ಕೈಯಿಂದ ಬರೆದುಕೊಟ್ಟ ದೂರಿನ ಪ್ರತಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀಡಿದ್ದಾರೆ.

ಇದನ್ನು ಪರಿಶೀಲಿಸಿದ ಆಯುಕ್ತರು, ಪ್ರಕರಣವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವರ್ಗಾಯಿಸಿದ್ದಾರೆ.
ನಾನು ಪೊಲೀಸರಿಗೆ ದೂರು ನೀಡದಂತೆ ತಡೆಯಲು ಯತ್ನಿಸಿದರು ಮತ್ತು ನನ್ನ ಹತ್ಯೆಗೆ ರಮೇಶ್ ಜಾರಕಿಹೊಳಿ ಅವರು ಮುಂದಾಗಿದ್ದರು ಎಂದು ಯುವತಿ ಆರೋಪ ಮಾಡಿದ್ದಾರೆ.
ಈ ನಡುವೆ ಶುಕ್ರವಾರ ಬೆಳಗ್ಗೆ ಯುವತಿ ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಳು ನನಗೆ 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿರುವುದರಿಂದ ಶುಕ್ರವಾರ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. ಎಲ್ಲ ಪಕ್ಷದ ನಾಯಕರು, ರಾಜ್ಯದ ಜನರು ನನಗೆ ಬೆಂಬಲಿಸುತ್ತಿದ್ದಾರೆ. ಹೀಗಾಗಿ ವಕೀಲ ಜಗದೀಶ್ ಅವರ ಮೂಲಕ ಶುಕ್ರವಾರ ರಮೇಶ್ ಜಾರಕಿಹೊಳಿ ವಿರುದ್ಧ
ದೂರು ನೀಡುತ್ತೇನೆ ಎಂದು ಹೇಳಿದ್ದಳು.


ನಿಮ್ಮ ಕಾಮೆಂಟ್ ಬರೆಯಿರಿ