ಶುಕ್ರವಾರ ಮಣಿಪಾಲ ಎಂಐಟಿಯ 184 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಉಡುಪಿ: ಕೋವಿಡ್ ಎರಡನೇ ಅಲೆಯ ಭೀತಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 210 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, . ಇವರಲ್ಲಿ 184 ಸೋಂಕಿತರು ಮಣಿಪಾಲ ಎಂಐಟಿ ಕ್ಯಾಂಪಸ್ ಒಳಗಿರುವ ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 210 ಜನರಿಗೆ ಕೊರೊನಾ ಸೋಂಕು ದೃಢಪ ಟ್ಟಿದ್ದು, . ಇವರಲ್ಲಿ ಉಡುಪಿ ತಾಲೂಕಿನ 199 ಮಂದಿಗೆ ದೃಢಪಟ್ಟಿದೆ. ಇದರರಲ್ಲಿ ಎಂಐಟಿಯ 184 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ, ಉಳಿದಂತೆ ಕುಂದಾಪುರ ತಾಲೂಕಿನ 9 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಒಟ್ಟು 4129 ಮಂದಿಯನ್ನು ಆರ್‌ಟಿಪಿಸಿಆರ್ ಪರೀಕ್ಷೆಗೊಳಪಡಿಸಲಾಗಿತ್ತು ಎಂದು ತಿಳಿಸಿದರು.

 

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement