ನನಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ, ಹತಾಶೆ ಮಾತಿಗೆ ಉತ್ತರಿಸುವುದಿಲ್ಲ; ಡಿಕೆಶಿ

posted in: ರಾಜ್ಯ | 0

ಹೊಸೂರು:’ನನಗೂ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖೆ ಮಾಡಲಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸಿಡಿ ಪ್ರಕರಣದಲ್ಲಿ ಯುವತಿಯನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಂತ್ರಸ್ತ ಯುವತಿ ಪೋಷಕರ ಆರೋಪದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಪಾಪ, ಅವರು ಹತಾಶರಾಗಿದ್ದಾರೆ, ಬೇಸರದಲ್ಲಿದ್ದಾರೆ. ಅವರಿಗೆ ಅವರ ಸಮಸ್ಯೆ ಇದೆ. ಹೀಗಾಗಿ ಈ ರೀತಿ ಮಾತನಾಡುತ್ತಾರೆ. ಅವರಿಗೆ ನಾನು ಉತ್ತರ ಕೊಡಲು ಹೋಗುವುದಿಲ್ಲ. ಕಾನೂನಿದೆ, ಪೊಲೀಸ್ ಅಧಿಕಾರಿಗಳಿದ್ದಾರೆ.  ತನಿಖೆ ನಡೆಯುತ್ತಿದೆ. ಎಲ್ಲ ವಿಚಾರಣೆ ಮುಗಿಯಲಿ ಎಂದು ಮಾರ್ಮಿಕವಾಗಿ ಹೇಳಿದರು.
ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ. ಅವರೇ ಇದನ್ನು ಬಗೆಹರಿಸಿಕೊಳ್ಳಬೇಕು.
ರಮೇಶ್ ಜಾರಕಿಹೊಳಿ ಅವರು ಇವತ್ತೊಂದು ಮಾತನಾಡುತ್ತಾರೆ, ನಾಳೆ ಒಂದು ಮಾತನಾಡುತ್ತಾರೆ, ನಾಡಿದ್ದು ಇನ್ನೊಂದು ಮಾತನಾಡುತ್ತಾರೆ. ಅವಕ್ಕೆಲ್ಲ ಉತ್ತರ ಕೊಟ್ಟುಕೊಂಡು ಕೂರಲು ನಾನು ತಯಾರಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅವರದೇ ಸರ್ಕಾರ ಇದೆ. ಕಾನೂನು ಪ್ರಕಾರ ತನಿಖೆ ಮಾಡಲಿ. ತಪ್ಪು ಮಾಡಿರುವವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.
ನಾನು ಸಂತ್ರಸ್ತ ಯುವತಿಯನ್ನು ಭೇಟಿ ಮಾಡಿಲ್ಲ.ಅವಳು ನನ್ನ ಬಳಿ ಯಾರೂ ಬಂದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಓದಿರಿ :-   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 32 ಶೈಕ್ಷಣಿಕ ಜಿಲ್ಲೆಗೆ ಎ ಗ್ರೇಡ್, ಮೊದಲನೇ ಸ್ಥಾನ ಹಂಚಿಕೊಂಡ 145 ವಿದ್ಯಾರ್ಥಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ