ಆರೋಪಿ ವಿಚಾರಣೆ ನಡೆಸದೆ ಸಂತ್ರಸ್ತೆ ಪೋಷಕರ ವಿಚಾರಣೆ ಎಷ್ಟು ಸರಿ: ವಕೀಲ ಜಗದೀಶ ಪ್ರಶ್ನೆ

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ಆರೋಪಿಯನ್ನು ಈವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಆದರೆ ಸಂತ್ರಸ್ತೆಯ ಪೋಷಕರನ್ನು ವಿಚಾರಣೆ ನಡೆಸುತ್ತಿರುವುದು ಎಷ್ಟು ಸರಿಎಂದು ಯುವತಿ ಪರ ವಕೀಲ ಜಗದೀಶ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶಜಾರಕಿಹೊಳಿ ಸಿಡಿ ಪ್ರಕರಣದ ಸಂಬಂಧ ಸಂತ್ರಸ್ತೆಯ ಪೋಷಕರು ಶನಿವಾರ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿಯಾಗಲು ನಮಗೆ ಅವಕಾಶ ಸಿಕ್ಕಿಲ್ಲ. ಆಶ್ಚರ್ಯಕರ ಸಂಗತಿಯೆಂದರೆ ಶುಕ್ರವಾರ ಎಫ್‌ಐಆರ್ ದಾಖಲಾಗಿದ್ದರೂ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಸರ್ಕಾರದ ಪರ ಕೆಲಸ ಮಾಡುತ್ತಿದ್ದಾರಾ ಅಥವಾ ನ್ಯಾಯದ ಪರ ಕೆಲಸ ಮಾಡುತ್ತಿದ್ದಾರಾ ಎನ್ನುವ ಅನುಮಾನ ಶುರುವಾಗಿದೆ ಎಂದು ದೂರಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement