ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 2886 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 9,83,930ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 12,492ಕ್ಕೆಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1179 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆದ ಒಟ್ಟಾರೆ ಸಂಖ್ಯೆ 9,50,167ಕ್ಕೆ ಏರಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,252ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿಯೇ 1820 ಸೋಂಕು ಪ್ರಕರಣಗಳು ವರದಿಯಾಗಿದ್ದು, ಇಬ್ಬರು ಸೋಂಕಿಗೆ ಮೃತಪಟ್ಟಿದ್ದಾರೆ. 474 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,671ಕ್ಕೆ ಜಿಗಿದಿದೆ.
ನಿಮ್ಮ ಕಾಮೆಂಟ್ ಬರೆಯಿರಿ