ತಂದೆ-ಸಹೋದರ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಯುವತಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತಲ್ಲಣ ಮೂಡಿಸುತ್ತಿರುವ ಸಿಡಿ ಪ್ರಕರಣ ಶನಿವಾರ ಸಾಕಷ್ಟು ತಿರುವು ಕಂಡಿದ್ದು, ಈಗ ಸಿಡಿ ಯುವತಿಯು ೫ನೇ ವಿಡಿಯೋ ಬಿಡುಗಡೆ ಮಾಡಿರುವುದು ಮತ್ತೊಂದು ಟ್ವಿಸ್ಟ್‌ಗೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ರಮೇಶ್ ಜಾರಕಿಹೊಳಿ ಹಾಗೂ ಸಿಡಿಯಲ್ಲಿ ಇದ್ದಾಳೆ ಎನ್ನಲಾಗುತ್ತಿರುವ ಯುವತಿಯ ಪೋಷಕರು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಸಿಡಿ ಯುವತಿಯ ಮತ್ತೊಂದು ವಿಡಿಯೋ ಬಿಡುಗಡೆಯಾಗಿರುವುದು ವಿಶೇಷವಾಗಿದೆ.
ವಿಡಿಯೋದಲ್ಲಿ ಯುವತಿಯು ಶನಿವಾರದ ಬೆಳವಣಿಗೆಯಿಂದ ಭಯವಾಗುತ್ತಿದೆ. ನಮ್ಮ ಅಪ್ಪ-ಅಮ್ಮನಿಗೆ ಏನೂ ಗೊತ್ತಿಲ್ಲ. ಪ್ರಕರಣವನ್ನು ಬೇರೆ ಕಡೆ ತಿರುಗಿಸುತ್ತಿದ್ದಾರೆ ಎಂದು ಹೇಳಿದ್ದಾಳೆ.
ಮಗಳನ್ನು ಡಿ.ಕೆ. ಶಿವಕುಮಾರ್ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಪೋಷಕರ ಹೇಳಿಕೆಯ ಬೆನ್ನಲ್ಲೇ ಯುವತಿ ವಿಡಿಯೋ ಹರಿಬಿಟ್ಟಿದ್ದಾಳೆ. ತಂದೆ, ತಾಯಿಯ ಮೇಲೆ ಪ್ರಭಾವ ಬೀರಿ ಹೇಳಿಕೆ ಪಡೆಯಲಾಗಿದೆ. ಇವತ್ತಿನ ಬೆಳವಣಿಗೆ ನೋಡಿದರೆ ಹೇಳಿಕೆ ನೀಡಲು ನನಗೆ ಭಯ ಆಗುತ್ತಿದೆ. ಅನ್ಯಾಯವಾಗಿರುವುದು ನನಗೆ. ಆದರೆ ನಮ್ಮ ಮನೆಯವರನ್ನು ಕರೆದುಕೊಂಡು ಹೋಗಿ ವಿಚಾರಣೆ ಮಾಡಲಾಗಿದೆ. ನನಗೆ ನ್ಯಾಯ ಸಿಗಬೇಕು. ನನ್ನ ಅಪ್ಪ, ಅಮ್ಮನಿಗೆ ಇದರ ಬಗ್ಗೆ ಏನು ಗೊತ್ತಿಲ್ಲ. ಅವರನ್ನು ಕರೆಸಿ ವಿಚಾರಣೆ ಮಾಡುವಂತಹುದು ಏನಿತ್ತು ಎಂದು ಯುವತಿ ಪ್ರಶ್ನಿಸಿದ್ದಾಳೆ.
ಇದರಲ್ಲಿ ಮ್ತೊಂದು ಮಾತನ್ನು ಯುವತಿ ಹೇಳಿದ್ದಾಳೆ. ಇದುವರೆಗೆ ಎಸ್‍ಐಟಿ ಎದುರು ಹಾಜರಾಗುವುದಾಗಿ ಹೇಳುತ್ತ ಬಂದಿದ್ದ ಯುವತಿ, ಇದೀಗ ಮಾತು ಬದಲಿಸಿ ನೇರವಾಗಿ ನ್ಯಾಯಾಧೀಶರ ಎದುರು ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದಾಳೆ. ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ, ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್ ಅವರಿಗೆ ಯುವತಿ ಮನವಿ ಮಾಡಿಕೊಂಡಿದ್ದಾಳೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement