ಪ.ಬಂಗಾಳ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಂಗ್ಲಾ ಪ್ರವಾಸ: ಚುನಾವಣಾ ಆಯೋಗಕ್ಕೆ ದೂರು ನೀಡುವೆ ಎಂದ ಮಮತಾ

ಕೊಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರ ವೀಸಾ ರದ್ದುಗೊಳಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪ್ರಧಾನ ಮಂತ್ರಿಗಳ ಬಾಂಗ್ಲಾದೇಶದ ಭೇಟಿಯು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಹೇಳಿರುವ ಅವರು, ಮೋದಿ ಅವರ ಬಾಂಗ್ಲಾದೇಶದ ವೀಸಾ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ ನಂತರ ಬಾಂಗ್ಲಾದೇಶದ ನಟರ ವೀಸಾ ರದ್ದುಗೊಳಿಸುವಂತೆ ಭಾರತ ಸರ್ಕಾರ ಬಾಂಗ್ಲಾದೇಶದ ಸರ್ಕಾರದೊಂದಿಗೆ ಮಾತನಾಡಿತ್ತು. ಹೀಗಾಗಿ ಈಗಲೂ ಮೋದಿ ಚುನಾವಣೆ ಸಂದರ್ಭದಲ್ಲಿ ಬಾಂಗ್ಲಾ ಪ್ರವಾಸ ಮಾಡಿರುವುದರಿಂದ ಮೋದಿಯವರ ವೀಸಾವನ್ನೂರದ್ದುಗೊಳಿಸಬೇಕು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಬಾಂಗ್ಲಾದೇಶಕ್ಕೆ ಹೋಗಿದ್ದರು ಎಂದು ಹೇಳಿರುವ ಮಮತಾ ಇದು ತಪ್ಪಲ್ಲವೆಂದಾದರೆ ಚುನಾವಣೆಯ ಸಮಯದಲ್ಲಿ ಬಾಂಗ್ಲಾದೇಶದ ನಟನೊಬ್ಬ ತನ್ನ ಪರವಾಗಿ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಹೇಳಿದ್ದಾರೆ.
ಅಮೆರಿಕದಲ್ಲಿ ಚುನಾವಣೆ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಪರ ಪ್ರಚಾರ ಪ್ರಧಾನಿ ಮೋದಿ ನಡೆಸಿದ್ದಾರೆ ಎಂದುಆರೋಪಿಸಿರುವ ಮಮತಾ ಬ್ಯಾನರ್ಜಿ ನೀವು ಟ್ರಂಪ್‌ಗೆ ಬೆಂಬಲವಾಗಿ ಮತ ಚಲಾಯಿಸಲು ಹೋದರೆ, ನಿಮ್ಮ ಪರವಾನಗಿ ರದ್ದುಗೊಳ್ಳುವುದಿಲ್ಲ.ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯುತ್ತಿರುವಾಗ, ನಿರ್ದಿಷ್ಟ ಸಮುದಾಯದ ಮತಗಳನ್ನು ಕೇಳಲು ನೀವು ಬಾಂಗ್ಲಾದೇಶಕ್ಕೆ ಹೋಗುತ್ತೀರಿ. ಹೀಗಾಗಿ ವೀಸಾವನ್ನು ಏಕೆ ರದ್ದುಗೊಳಿಸಬಾರದು? ನಿಮ್ಮ ಪಾಸ್‌ಪೋರ್ಟ್ ಏಕೆ ರದ್ದುಗೊಳ್ಳಬಾರದು?ಎಂದು ಕೇಳಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. “ಇಲ್ಲಿ ಚುನಾವಣೆಗಳು ನಡೆಯುತ್ತಿವೆ ಮತ್ತು ಪ್ರಧಅನಿ ಬಾಂಗ್ಲಾದೇಶಕ್ಕೆ ಹೋಗಿ ಬಂಗಾಳ ಕುರಿತು ಉಪನ್ಯಾಸ ನೀಡುತ್ತಾರೆ. ಇದು ಚುನಾವಣಾ ನೀತಿ ಸಂಹಿತೆಯ ಸಂಪೂರ್ಣ ಉಲ್ಲಂಘನೆಯಾಗಿದೆ, ”ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement