ಬಾಂಗ್ಲಾಕ್ಕೆ ಭಾರತದಿಂದ 12 ಲಕ್ಷ ಕೊರೊನಾ ಲಸಿಕೆ ಕೊಡುಗೆ

ಢಾಕಾ : ಭಾರತವು ಶನಿವಾರ ಬಾಂಗ್ಲಾದೇಶಕ್ಕೆ 12 ಲಕ್ಷ ಕೋವಿಡ್-19 ಲಸಿಕೆಯ ಡೋಸ್‌ಗಳನ್ನು ಕೊಡುಗೆಯಾಗಿ ನೀಡಿದೆ. ಎರಡು ದಿನಗಳ ಪ್ರವಾಸಕ್ಕಾಗಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಲಸಿಕೆಗಳನ್ನೊಳಗೊಂಡ ಪ್ರಾತಿನಿಧಿಕ ಪೆಟ್ಟಿಗೆಯೊಂದನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾರಿಗೆ ಹಸ್ತಾಂತರಿಸಿದರು.
ಅದೇ ವೇಳೆ, ಮೋದಿ 109 ಅಂಬುಲೆನ್ಸ್‌ಗಳ ಪ್ರಾತಿನಿಧಿಕ ಕೀ ಹಸೀನಾರಿಗೆ ನೀಡಿದರು.
ಉಭಯ ನಾಯಕರು ದ್ವಿಪಕ್ಷೀಯ ಸಹಕಾರ ಮತ್ತು ಪರಸ್ಪರ ಹಿತಾಸಕ್ತಿಗಳ ಬಗ್ಗೆ ಮಾತುಕತೆ ನಡೆಸಿದರು. ಸಂಪರ್ಕ, ಇಂಧನ, ವ್ಯಾಪಾರ, ಆರೋಗ್ಯ ಮತ್ತು ಅಭಿವೃದ್ಧಿ ಸಹಕಾರಗಳ ಕ್ಷೇತ್ರಗಳಲ್ಲಿ ಸಾಧಿಸಲಾದ ಪ್ರಗತಿಯ ಬಗ್ಗೆಯೂ ಅವರು ಚರ್ಚಿಸಿದರು.
ಬಳಿಕ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿ ಐದು ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿದವು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement