ಅಹಮದಾಬಾದ್ ಐಐಎಂನಲ್ಲಿ 40 ಮಂದಿಗೆ ಕೊರೊನಾ ಸೋಂಕು

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನ (ಐಐಎಂ) ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಅಹಮದಾಬಾದ್‌ ಮುನ್ಸಿಪಲ್ ಕಾರ್ಪೋರೇಷನ್ ಉಪ ಆರೋಗ್ಯ ಅಧಿಕಾರಿ ಮೆಹುಲ್ ಆಚಾರ್ಯ, ಕೊರೊನಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸೇರಿದಂತೆ 40 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕ ವಾಸದಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಾಂಧಿನಗರದ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ 25 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತಗೊಂಡಿದೆ. ಯಾರಲ್ಲೂ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ಅಲ್ಲದೆ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಕ್ಯಾಂಪಸ್‌ನಲ್ಲಿ ಪ್ರವೇಶ ಹಾಗೂ ನಿರ್ಗಮನವನ್ನು ನಿರ್ಬಂಧಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಮುನ್ನಚ್ಚೆರಿಕಾ ಮಾರ್ಗಸೂಚಿಗಳನ್ನು ನಿಯಮಿತವಾಗಿ ಹಂಚಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನಿಮ್ಮ ಕಾಮೆಂಟ್ ಬರೆಯಿರಿ

advertisement