ಕರ್ನಾಟಕದಲ್ಲಿ ೧ರಿಂದ ೯ನೇ ತರಗತಿ ವರೆಗೆ ಪರೀಕ್ಷೆಯಿಲ್ಲದೆ ತೇರ್ಗಡೆ, ನಾಳೆ ನಿರ್ಧಾರ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯಿಂದಾಗಿ ದಿನೇ ದಿನೇ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ 1 ರಿಂದ ೯ನೇ ತರಗತಿ ವರೆಗಿನ  ಪರೀಕ್ಷೆ ರದ್ದುಗೊಳಿಸಿ ಹಾಗೆಯೇ ತೇರ್ಗಡೆ ಮಾಡುವ ಚಿಂತನೆ ನಡೆಸಿದೆಯೇ?  ಈ ಬಗ್ಗೆ ಮಾ.೨೯ರಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಸುಧಾಕರ ಅವರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ 1 ರಿಂದ 9 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವ ಬಗ್ಗೆ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗಿನ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯಿಂದ ಕೆಲವಷ್ಟು ಸಲಹೆಗಳನ್ನು ನೀಡಲಾಗಿದೆ. ಅವುಗಳ ಬಗ್ಗೆ ಚರ್ಚೆ ನಡೆಸಲಾಗುವುದು. ೧ರಿಂದ ೯ ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸುವುದರ ಕುರಿತೂ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಹರಡುತ್ತಿರುವುದು ರೂಪಾಂತರಿ ಸೋಂಕು. ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಆದರೂ ಮುಂದಿನ ೬-೭ ವಾರಗಳ ಕಾಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ಹೆಚ್ಚಬಹುದು ಎಂದು ತಿಳಿಸಿದರು.
ಪ್ರಸ್ತುತ ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಎಲ್ಲವನ್ನೂ ನಿಭಾಯಿಸುವುದು ಕಷ್ಟ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗೂ ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯ. ತಾಂತ್ರಿಕ ಸಲಹಾ ಸಮಿತಿಯೂ ಇದೇ ರೀತಿಯ ಸಲಹೆ ಮಾಡಿದೆ ಎಂದು ಸಚಿವರು ಹೇಳಿದರು.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement