ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದರು. ಪಶ್ಚಿಮ ಬಂಗಾಳದಲ್ಲಿ ೨೯೪ ಸ್ಥಾನಗಳಲ್ಲಿ ೨೦೦ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದರಲ್ಲಿ ಅನುಮಾನವಿಲ್ಲ. ಮೊದಲ ಹಂತದಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ.೮೪ರಷ್ಟು ಹಾಗೂ ಆಸ್ಸಾಂನಲ್ಲಿ ಶೇ.೭೯ರಷ್ಟು ಮತದಾನವಾಗಿದೆ. ಎರಡೂ ರಾಜ್ಯಗಳಲ್ಲಿ ಮತದಾನ ಸಂದರ್ಭದಲ್ಲಿ ಯಾವುದೇ ಹಿಂಸಾಚಾರದ ಘಟನೆ ನಡೆದಿಲ್ಲ ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮೈಸೂರು ಅನಂತಸ್ವಾಮಿ ಧಾಟಿಯಲ್ಲಿ ನಾಡಗೀತೆ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ; ದಶಕಗಳ ಸಮಸ್ಯೆಗೆ ತೆರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement