ಭಾರತದಲ್ಲಿ 63 ಸಾವಿರದ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಸೋಂಕು..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,714 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕಳೆದ 24 ತಾಸಿನಲ್ಲಿ 312 ಜನರು ಮಹಾಮಾರಿಗೆ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,552ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 4,86,310 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,13,23762 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 28,739 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ದೇಶದಲ್ಲಿ 11,81,289 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 24,09,50,842 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಈವರೆಗೆ 6,02,69,782 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement