ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ: ಶಾಸಕ ನಾರಾಯಣಸ್ವಾಮಿ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆ ಕೊಡುಗೆ ನೀಡಿದ ಸಿದ್ದರಾಮಯ್ಯ ಅವರೇ ಕೋಲಾರ ಕ್ಷೇತ್ರಕ್ಕೆ ಮುಂದಿನ ಅಭ್ಯರ್ಥಿ. ಅವರು ಶಾಸಕರಾದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು.
ರಮೇಶಕುಮಾರ, ನಂಜೇಗೌಡ, ನಜೀರ್‌ ಅಹ್ಮದ್‌ ಸೇರಿದಂತೆ ಪಕ್ಷದ ಮುಖಂಡರು ಕೋಲಾರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸುತ್ತಿದ್ದಾರೆ. ಒಂದೆರೆಡು ತಿಂಗಳುಗಳಲ್ಲಿ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ತಿಳಿಸಿದರು.
ಮಾಜಿ ಸಚಿವ ವರ್ತೂರ ಪ್ರಕಾಶ ಕಾಂಗ್ರೆಸ್‌ನವರಲ್ಲ. ಅವರಿಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಅವರು ಕಾಂಗ್ರೆಸ್‌ ಸೇರುವುದು ಕನಸಿನ ಮಾತು. ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಕೋಲಾರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುತ್ತಾರೆ ಎಂಬುದು ಪ್ರಕಾಶ್‌ ಅವರ ವೈಯಕ್ತಿಕ ಹೇಳಿಕೆ. ಅವರಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ತೀರ್ಮಾನ ಮಾಡುವ ಹಕ್ಕಿಲ್ಲ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement