ಪ್ರತಿಭಟನೆಗಳು ಎಸ್‌ಐಟಿ ತನಿಖೆ ಮೇಲೆ ಪ್ರಭಾವ ಬೀರಲ್ಲ: ಬೊಮ್ಮಾಯಿ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆಯ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿಭಟನೆಗಳು ಅಲ್ಲಲ್ಲಿ‌ ನಡೆಯುತ್ತವೆ. ಅವುಗಳನ್ನು ಸ್ಥಳೀಯ ಪೊಲೀಸರು ನೋಡಿಕೊಳ್ಳುತ್ತಾರೆ. ಎಸ್‌ಐಟಿ ತನಿಖೆ ಕ್ರಮಬದ್ಧವಾಗಿ, ವೈಜ್ಞಾನಿಕವಾಗಿ ನಡೆಯಲಿದೆ. ಎಸ್ ಐ ಟಿಗೆ ನಾವು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರುತ್ತದೆ. ಹೊರಗೆ ನಡೆಯುತ್ತಿರುವ ಪ್ರತಿಭಟನೆಗಳು ಎಸ್ಐಟಿ ತನಿಖೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೆನಪಿನ ಶಕ್ತಿ ಕಡಿಮೆ ಇದೆ. ಅವರು ಮುಖ್ಯಮಂತ್ರಿ ಆಗಿದ್ದಾಗ ಅಂದಿನ ಸಚಿವ ಎಚ್. ವೈ. ಮೇಟಿ ಸಿಡಿ  ಪ್ರಕರಣದಲ್ಲಿ ಅವರು ಏನು ಮಾಡಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಕರಣವನ್ಮು ಸಿಐಡಿಗೆ ಕೊಟ್ಟು ಮೇಟಿ ಪ್ರಕರಣ ಮುಚ್ಚಿ ಹಾಕಿದರು. ಯುವತಿ ದೂರು ನೀಡಿದರೂ ಪ್ರಕರಣ ದಾಖಲಿಸಲಿಲ್ಲ.   ಒಬ್ಬ ಅಧಿಕಾರಿಯೇ ವಿಚಾರಣೆ ಮಾಡಿ ಮೇಟಿ ಅವರಿಗೆ ಕ್ಲೀನ್ ಚಿಟ್ ನೀಡಿದರು.
ಇದೇ ವಿಷಯವನ್ನು ಅಧಿವೇಶನದಲ್ಲಿಯೂ ಹೇಳಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.
ಸಿಡಿ ಯುವತಿಗೆ ರಕ್ಷಣೆ ನೀಡಲು ನಾವು ಈಗಲೂ ಬದ್ಧ. ಈಗಾಗಲೇ ಯುವತಿಗೆ ೫ ಬಾರಿ ನೋಟೀಸ್ ನೀಡಿದ್ದೇವೆ. ಯುವತಿ ಇರುವ ಕಡೆಗೇ ಹೋಗಿ ರಕ್ಷಣೆ ನೀಡುತ್ತೇವೆ. ಅವರ ಕುಟುಂಬ ಸದಸ್ಯರಿಗೆ ರಕ್ಷಣೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಯಾರೇ ಆಗಲಿ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡಬಾರದು. ಎಸ್‌ಐಟಿ ತಂಡ ಕ್ರಮಬದ್ಧವಾಗಿ ಸರಿ ಹಾದಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯ ಹೊರ ಬರಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.__

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement