ಆರೋಪಿ ಬಂಧಿಸದೆ ಯುವತಿ ಹಾಜರಾಗಲು ಭಯಮುಕ್ತ ವಾತಾವರಣ ಸಾಧ್ಯವಿಲ್ಲ; ಯುವತಿ ಪರ ವಕೀಲ ಜಗದೀಶ್

posted in: ರಾಜ್ಯ | 0

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆಗಳನ್ನು ದಾಖಲಿಸಲಿದ್ದಾಳೆ. ಆದರೆ ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲು ಒಳ್ಳೆಯ ವಾತಾವರಣ ಕಲ್ಪಿಸಬೇಕು ಎಂದು ಸಿಡಿ ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ರೆಕಾರ್ಡ್ ಮಾಡಲು ಅನುಮತಿ ಕೇಳುತ್ತಿದ್ದೇವೆ. ಯುವತಿಗೆ ಸೂಕ್ತ ರಕ್ಷಣೆ ಸಿಕ್ಕರೆ ಸೋಮವಾರ ಮಧ್ಯಾಹ್ನವೇ ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುತ್ತೇವೆ ಎಂದರು.
ಭಾನುವಾರ ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರ ಮೇಲೆ ಆರೋಪಿ ಬೆಂಬಲಿಗರು ಕಲ್ಲುತೂರಾಟ, ಚಪ್ಪಲಿ ಎಸೆದಿದ್ದಾರೆ. ಹೀಗಿರುವಾಗ ಸಂತ್ರಸ್ತ ಯುವತಿ ನ್ಯಾಯಾಲಯದ ಮುಂದೆ ಬಂದು ಹೇಳಿಕೆ ನೀಡಲು ಕೂಡ ಭಯದ ವಾತಾವರಣವಿದೆ. ಸದ್ಯದ ಬೆಳವಣಿಗೆ ನೋಡಿದರೆ ನನಗೆ ವ್ಯವಸ್ಥೆ ಮೇಲೆ ನಂಬಿಕೆ ಬರುತ್ತಿಲ್ಲ ಎಂದು ಸ್ವತಃ ಯುವತಿಯೇ ಹೇಳಿಕೆ ನೀಡಿದ್ದಾಳೆ. ಮೊದಲು ಆರೋಪಿಯನ್ನು ಬಂಧಿಸಿ, ಒಳ್ಳೆಯ ವಾತಾವರಣ ಕಲ್ಪಿಸಿಕೊಡಬೇಕು. ಆರೋಪಿ ಬಂಧನವಾಗದೇ ಉತ್ತಮ ವಾತಾವರಣ ಸಾಧ್ಯವಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿಗೂ ನಾವು ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದರು.

advertisement

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಇದೀಗ ಗದಗದಲ್ಲಿ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಎಸ್ಕಾಂಗಳ ಖಾಸಗೀಕರಣ ಇಲ್ಲ, ಗ್ರಾಮೀಣ ಪ್ರದೇಶಗಳಿಗೆ ನಿರಂತರ 7 ತಾಸು ವಿದ್ಯುತ್ ಸರಬರಾಜು: ಸಿಎಂ ಬೊಮ್ಮಾಯಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement