
ಯಲ್ಲಾಪುರ:ಇಲ್ಲಿನ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ.
ಕೆಲವು ದಿನಗಳ ಹಿಂದೆ 10ನೇ ತರಗತಿಯ ಒಬ್ಬ ವಿದ್ಯಾರ್ಥಿನಿಗೆ ಈ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 123 ಜನರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಪರ್ಕಕ್ಕೆ ಬಂದಿರುವವವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗುವುದು. ಇತರ ವಿದ್ಯಾರ್ಥಿಗಳ ಗಂಟಲು ದ್ರವವನ್ನು ಮಂಗಳವಾರ ಪರೀಕ್ಷೆ ಮಾಡಲಾಗುವುದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ತಿಳಿಸಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ