ಲಾಕ್‌‌ಡೌನ್‌ ಇಲ್ಲ.. ಆದರೆ ಕೊರೊನಾ ನಿಯಂತ್ರಣಕ್ಕೆ 15 ದಿನ ಪ್ರತಿಭಟನೆ, ಸಮಾವೇಶ ಇತ್ಯಾದಿ ಬಂದ್‌

ಬೆಂಗಳೂರು : ನಾಳೆಯಿಂದ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆಯಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ,ಸಮಾವೇಶ ಇತ್ಯಾದಿಗಳಿಗೆ ಅವಕಾಶವಿಲ್ಲ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡುವುದಿಲ್ಲ. ಅದರೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಕೊರೋನಾ ನಿಯಂತ್ರಣ ಕುರಿತಂತೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಸ್ಕ್‌ ಧರಿಸದಿದ್ದರೆ ದಂಡ ಸಹ ಹಾಕುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಈಗಾಗಲೇ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಏಪ್ರಿಲ್ 5ರಿಂದ ಕಾರ್ಯಾರಂಭ ಮಾಡುವಂತೆ ಸಜ್ಜುಗೊಳಿಸಲಾಗಿದೆ. ಅನುದಾನಕ್ಕಾಗಿ 1,500ಕೋಟಿ ರೂ. ಮೀಸಲಿಡಲಾಗಿದೆ.ಕೋವಿಡ್ ಪರೀಕ್ಷೆ ಹೆಚ್ಚಳ ಮಾಡಲು ತಂಡ ರಚಿಸಲಾಗಿದೆ. ಸಂಪರ್ಕಿತರ ಪತ್ತೆಗೆ ಕಂದಾಯ, ಶಿಕ್ಷಣ ಇಲಾಖೆಯ ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರ, ಗ್ರಾಮಾಂತರ ಸರ್ಕಾರ ಆಸ್ಪತ್ರೆಗಳಲ್ಲಿ 1630 ಬೆಡ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗಾಗಿ ಸಿದ್ಧರಿರುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕೊರೋನಾ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಗಳಲ್ಲಿ ಪಾರ್ಟಿಗೆ ಕಡಿವಾಣ ಹಾಕಲಾಗುತ್ತಿದೆ. ಮೈಸೂರು, ಕಲಬರ್ಗಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತಿದಿನ 100 ಕೊರೊನ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಿಯಂತ್ರಣ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement