ಭಾರತದಲ್ಲಿ ಸೋಮವಾರವೂ 68 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..!

ನವ ದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ (ಸೋಮವಾರ) 68,020 ಜನರಲ್ಲಿ ಸೋಂಕು ಪತ್ತೆಯಾಗಿದೆ. 291 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,20,39,644ಕ್ಕೆ ಏರಿಕೆಯಾಗಿದೆ. ಹಾಗೂ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 1,61,843ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 5,21,808 ಕೊರೊನಾ ಸಕ್ರಿಯ ಪ್ರಕರಣಗಳಿದ್ದು 1,13,55,993 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 32,231 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾನುವಾರ ದೇಶದಲ್ಲಿ 9,13,319 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 24,18,64,161 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 6,05,30,435 ಜನರಿಗೆ ಲಸಿಕೆ ನೀಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕನ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement