ಮಹಾರಾಷ್ಟ್ರದ ಗಡ್ಚಿರೋಲಿ ಅರಣ್ಯದಲ್ಲಿ ಪೊಲೀಸರ ಜೊತೆ ಗುಂಡಿನ ಚಕಮಕಿ: ಐವರು ನಕ್ಸಲರ ಸಾವು

ಗಡ್ ಚಿರೋಲಿ: ಮಹಾರಾಷ್ಟ್ರದ ಗಡ್ ಚಿರೋಲಿಯ ಖೋಬ್ರಮೇಂಧ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರನ್ನು ಪೊಲೀಸರು ಕೊಂದಿದ್ದಾರೆ.
ಖುರ್ಖೇಡಾ ಪ್ರದೇಶದ ಖೋಬ್ರಮೇಧ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಹಾಗೂ ಪೊಲೀಸರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರು ಸತ್ತಿದ್ದಾರೆ,
ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರನ್ನು ಕಂಡಾಕ್ಷಣ ಕೂಡಲೇ ನಕ್ಸಲೀಯರು ಪೊಲೀಸರತ್ತ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದಾಗ ಅಲ್ಲಿಂದ ಅವರು ತಪ್ಪಿಸಿಕೊಂಡಿದ್ದಾರೆ. ಸುಮಾರು ಒಂದು ತಾಸು ಕಾಲ ನಡೆದ ಪೊಲೀಸರು ಹಾಗೂ ನಕ್ಸಲೀಯರ ಮಧ್ಯೆ ಗುಂಡಿನ ಚಕಮಕಿ ನಡೆದಿಎ. ಈ ಸಂದರ್ಭದಲ್ಲಿ ಐವರು ನಕ್ಸಲೀಯರು ಪೊಲೀಸರ ಗುಂಡಿಗೆ ಹತರಾಗಿದ್ದಾರೆ ಎಂದು ಎಂದು ನಕ್ಸಲ್ ಶ್ರೇಣಿಯ ಡಿಐಜಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಎನ್ ಕೌಂಟರ್ ಮುಗಿದ ನಂತರ ಮದ್ದು ಗುಂಡುಗಳೊಂದಿಗೆ ಐವರು ನಕ್ಸಲೀಯರ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಅವರ ಗುರುತು ಪತ್ತೆಯಾಗಬೇಕಿದೆ ಎಂದು ಸಂದೀಪ ಪಾಟೀಲ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಜನವರಿಯಲ್ಲಿ ಉದ್ಘಾಟನೆಯಾದ ನಂತರ ಅಯೋಧ್ಯೆ ರಾಮಮಂದಿರದಲ್ಲಿ ಇದೇ ಮೊದಲ ಬಾರಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement