ಸಿಡಿ ಪ್ರಕರಣ: ವಿಚಾರಣೆಗೆ ರಮೇಶ ಜಾರಕಿಹೊಳಿ ಹಾಜರು

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ.
ವಿಚಾರಣೆ ಆರಂಭವಾಗಬೇಕಿದೆ.
ಈ ಸಿಡಿ ಪ್ರಕರಣ ಎಸ್‌ಐಟಿಗೆ ವರ್ಗಾವಣೆಯಾಗಬೇಕಿದ್ದು, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ಗೆ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ.
ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಹೈಕೋರ್ಟ್‌ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ.ಯುವತಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಯುವತಿ ವಕೀಲ ಜಗದೀಶ ತಿಳಿಸಿದ್ದಾರೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement